ಸೆ.೨೫ ರಿಂದ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಕ್ರೀಡಾಕೂಟ.

ಕೊಪ್ಪಳ, ಸೆ.೨೩ (ಕ ವಾ) ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾ ಕೂಟಗಳು ಸೆ.೨೫ ರಿಂದ ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಯಲಿವೆ.
     ರಾಜ್ಯ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಕೂಟ ಸೆ.೨೫ ಮತ್ತು ೨೬ ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ.  ಕಬ್ಬಡ್ಡಿ ಕ್ರೀಡಾಕೂಟ ಅಕ್ಟೋಬರ್ ೦೪ ರಂದು ರಾಮನಗರ ಜಿಲ್ಲೆಯ ಕನಕಪುರ ಟೌನ್‌ನಲ್ಲಿರುವ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಟೆನ್ನಿಕಾಯ್ಟ್ ಕ್ರೀಡಾಕೂಟ ಅಕ್ಟೋಬರ್ ೦೬ ಮತ್ತು ೦೭ ರಂದು ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ (ಸರ್ಕಾರಿ ವಿಜ್ಞಾನ ಕಾಲೇಜು ಆವರಣ) ನಡೆಯಲಿದೆ. ಕೊಪ್ಪಳ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಂದ ರಾಜ್ಯಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ನಿಗದಿತ ಸ್ಥಳಗಳಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಗಳಿಗೆ ಹಾಜರಾಗಬಹುದಾಗಿದೆ ಎಂದು ಕೊಪ್ಪಳ ಪದವಿ ಪೂರ್ವ ಶಿಕ್ಷಣ ಇಲಾಖೆ,  ಉಪನಿರ್ದೇಶಕರು ತಿಳಿಸಿದ್ದಾರೆ. 

Please follow and like us:
error