ಬಿ.ಇಡಿ ಕೋರ್ಸ್ : ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಸೂಚನೆ

koppal : ಕೊಪ್ಪಳ ಜಿಲ್ಲೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ೨೦೧೧-೧೨ ನೇ ಸಾಲಿನಲ್ಲಿ ಬಿ.ಇಡಿ ಕೋರ್ಸಿನ ದಾಖಲಾತಿ ಸಂಬಂಧ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 
ಕೊಪ್ಪಳ ಜಿಲ್ಲೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಬಿ.ಇಡಿ ಕೋರ್ಸಿಗೆ ದಾಖಲಾತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ನವೆಂಬರ್ ೧೮ ರಂದು ಪ್ರಕಟಿಸಲಾಗಿದ್ದು, ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳು  ನವೆಂಬರ್  ೧೮ ರಿಂದ ೨೫ ರವರೆಗೆ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಬಾಲಕರ ಪ.ಪೂ. ಕಾಲೇಜು, ಕೊಪ್ಪಳ), ಮೂಲ ದಾಖಲೆಗಳೊಂದಿಗೆ ಪರಿಶೀಲನೆಗೆ ಹಾಜರಾಗಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರು  ತಿಳಿಸಿರುತ್ತಾರೆ.

Leave a Reply