ಪದವಿ ಪರೀಕ್ಷೆ : ಅಳವಂಡಿ ಕಾಲೇಜಿನ ಚೇತನಕುಮಾರ ಸೊಲಗಿ ೨ನೇ ರ‍್ಯಾಂಕ್

 ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ನಡೆಸಿದ ೨೦೧೩-೧೪ನೇ ಸಾಲಿನ ಬಿಎ ಅಂತಿಮ ಪದವಿ ಪರೀಕ್ಷೆಯಲ್ಲಿ ಅಳವಂಡಿಯ ಶ್ರೀ ಶಿವಮೂರ್ತಿಸ್ವಾಮಿ ಇನಾಮದಾರ ಕಟ್ಟಿಮನಿ ಹಿರೇಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಚೇತನಕುಮಾರ ಸೊಲಗಿ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಸಂಗಣ್ಣ ಕರಡಿ, ಕಾಲೇಜು ಅಭಿವೃದ್ದಿ ಸಮಿತಿಯ ಸರ್ವ ಸದಸ್ಯರು, ಗ್ರಾಮದ ಶಿಕ್ಷಣ ಪ್ರೇಮಿಗಳು, ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅಭಿನಂದನೆ ಸಲ್ಲಿಸಿದ್ದಾರೆ.
Please follow and like us:
error