ಭಾಗ್ಯನಗರ: ನಾಳೆ ಮೈಲಾರಲಿಂಗೇಶ್ವರ ನೂತನ ದೇವಸ್ಥಾನಕ್ಕೆ ಅಡಿಗಲ್ಲು ಸಮಾರಂಭ

  ಶ್ರೀ ಏಳು ಕೋಟಿ ಮೈಲಾರಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಇದೇ ದಿ.೨೧ ರಂದು ಬುಧವಾರ ಬೆಳಿಗ್ಗೆ ೯ ಗಂಟೆಗೆ ಸಮೀಪದ ಭಾಗ್ಯನಗರದ ಶಾಸ್ತ್ರೀ ಕಾಲೋನಿಯಲ್ಲಿ ನೂತನ ದೇವಸ್ಥಾನ ಕಟ್ಟಡದ ಅಡಿಗಲ್ಲು ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭಕ್ಕೆ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಮೈಲಾರದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಧರ್ಮಕರ್ತರಾದ ಶ್ರೀ ಗುರುವೆಂಕಪಯ್ಯ ಓಡೆಯರ್ ನೂತನ ದೇವಸ್ಥಾನಕ್ಕೆ ಅಡಿಗಲ್ಲು ಕಾರ್ಯಕ್ರಮ ನೇರವೇರಿಸಲಿದ್ದಾರೆ ಎಂದು ಭಾಗ್ಯನಗರ ಶ್ರೀ ಏಳು ಕೋಟಿ ಮೈಲಾರಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ. ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಸಕಲ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಮೈಲಾರಲಿಂಗೇಶ್ವರನ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದ್ದಾರೆ. 

Leave a Reply