ಪಿಡಿಓಗಳ ಸಾಮೂಹಿಕ ರಾಜೀನಾಮೆ

ಕೊಪ್ಪಳ :  ಸಣ್ಣೂರು ಗ್ರಾಮ ಪಂಚಾಯತಿಯ ಪಿಡಿಓ ಮಂದಾಕಿನಿ  ಆತ್ಮಹತ್ಯೆ ಪ್ರಕರಣ ಖಂಡಿಸಿ ಕೊಪ್ಪಳ ಜಿಲ್ಲೆಯ ಪಿಡಿಓಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಪಿಡಿಓಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ತಡೆಗಟ್ಟಲು ಆಗ್ರಹಿಸಿದ್ದಾರೆ.  ಗ್ರಾಮೀಣಾಭಿವೃದ್ದಿ ಅಧಿಕಾರಿಗಳ ಸಂಘದ ಲೆಟರ್ ಹೆಡ್ ನಲ್ಲಿ ರಾಜೀನಾಮೆ ನೀಡಿರುವ ಪಿಡಿಓಗಳು ಜನರು  ಮತ್ತು ಚುನಾಯಿತ ಪ್ರತಿನಿಧಿಗಳು ಕಿರುಕುಳ ನೀಡುತ್ತಿದ್ದಾರೆ. ನಮಗೆ ರಕ್ಷಣೆ ನೀಡಿ ಎಂದು ಆಗ್ರಹಿಸಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸುವವರೆಗೆ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ. 

Related posts

Leave a Comment