ಸೆ.೨೧ ರಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ.

ಕೊಪ್ಪಳ, ಸೆ.೧೫
(ಕ ವಾ) ಪದವಿ ಪೂರ್ವ ಶಿಕ್ಷಣ ಇಲಾಖೆ, ಕೊಪ್ಪಳ, ಶ್ರೀ ಗವಿಸಿದ್ಧೇಶ್ವರ
ಪದವಿ ಪೂರ್ವ ಕಾಲೇಜು, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ
ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಸೆ.೨೧ ರಂದು ಬೆಳಿಗ್ಗೆ ೦೯
ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
              ಸಣ್ಣ
ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ ಕ್ರೀಡಾ ಜ್ಯೋತಿ ಬೆಳಗಿಸುವರು. ಸಂಸದ
ಸಂಗಣ್ಣ ಕರಡಿ ಧ್ವಜಾರೋಹಣ ನೆರವೇರಿಸುವರು. ಕೊಪ್ಪಳ ಶಾಸಕ ರಾಗೌಏಂದ್ರ ಹಿಟ್ನಾಳ್
ಸಮಾರಂಭದ ಅಧ್ಯಕ್ಷತೆ ವಹಿಸುವರು. ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ,
ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು,
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಪಂಚಾಯತ್
ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ
ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ, ಜಿಲ್ಲಾಧಿಕಾರಿ ರಮಣದೀಪ ಚೌದರಿ, ಜಿಲ್ಲಾ
ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿ ಡಾ||ತ್ಯಾಗರಾಜನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ
ಶ್ಯಾಮಸುಂದರ, ಕ್ಷೇಥ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ
ಸುದರ್ಶನರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
              ಸೆ.೨೨
ರಂದು ಸಂಜೆ ೦೪ ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಶ್ರೀ
ಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪರೀಕ್ಷಿತರಾಜ ಅಧ್ಯಕ್ಷತೆ
ವಹಿಸುವರು. ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ
ಉಪನ್ಯಾಸಕ ಡಾ|| ಸಿದ್ದಲಿಂಗಪ್ಪ ಕೊಟ್ನೇಕಲ್ ಇವರನ್ನು ಸನ್ಮಾನಿಸಲಾಗುವುದು ಎಂದು ಪದವಿ
ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ತಿಳಿಸಿದೆ.

  

Please follow and like us:
error