ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಪದಗ್ರಹಣ

ಕೊಪ್ಪಳ. ಜ. ೪: ಇಲ್ಲಿನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜ. ೮ರಂದು ನಗರದ ವಾರ್ತಾ ಭವನದಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಂಗಣ್ಣ ಕರಡಿ ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹೆಚ್.ಎಸ್.ಹರೀಶ ವಹಿಸುವರು. 
ಇದೇ ಸಂದರ್ಭದಲ್ಲಿ ಜಿಲ್ಲಾ ಕಾಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ ಸುಣಗಾರ ಅವರು ಪದಗ್ರಹಣ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಸದ ಶಿವರಾಮನಗೌಡ, ಜಿ.ಪಂ.ಅಧ್ಯಕ್ಷೆ ಜ್ಯೋತಿ ನಾಗರಾಜ ಬಿಲ್ಗಾರ, ಶಾಸಕರಾದ ಅಮರೆಗೌಡ ಬಯ್ಯಾಪೂರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ಶಿವರಾಜ ತಂಗಡಗಿ, ಹಾಲಪ್ಪ ಆಚಾರ, ಜಿ.ಪಂ.ಉಪಾಧ್ಯಕ್ಷೆ ಡಾ. ಸೀತಾ ಗೂಳಪ್ಪ ಹಲಿಗೇರಿ, ಮಾಜಿ ಸಚಿವ ಇಕ್ಬಾಲ ಅನ್ಸಾರಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ತಾ.ಪಂ.ಅಧ್ಯಕ್ಷ ಅಮರೇಶ ಉಪಲಾಪೂರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಪ್ಪಣ್ಣ ಪದಕಿ, ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಸಿಇಓ ಸಿ.ಎಚ್.ಕಾಕನೂರ, ಎಸ್ಪಿ ಬಿ.ಎಸ್.ಪ್ರಕಾಶ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂ, ಗುತ್ತಿಗೆದಾರ ಎಸ್.ಆರ್.ನವಲಿಹಿರೇಮಠ, ಜಿ.ಟಿ.ಪಂಪಾಪತಿ, ಸುರೇಶ ಭೂಮರೆಡ್ಡಿ, ಜೆಡಿಎಸ್ ಮುಖಂಡ ಪ್ರದೀಪಗೌಡ ಮಾಲಿಪಾಟೀಲ್, ಕೆ.ಎಂ.ಸಯ್ಯದ, ಮಂಜುನಾಥ ಗೊಂಡಬಾಳ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ಅಂಗವಾಗಿ ಹಾಸ್ಯ ಸಂಜೆ ಹಾಗೂ ವಿವಿಧ ಕಲಾವಿದರಿಂದ ರಸ ಮಂಜರಿ ಕಾರ್ಯಕ್ರಮವೂ ಜರುಗಲಿದೆ ಎಂದು ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ ಪವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:
error