ವಸತಿ ನಿಲಯಗಳ ಆಹಾರದ ಗುಣಮಟ್ಟ ಹೆಚ್ಚಿಸಲು ಡಿ.ಸಿ. ಡಾ. ಪ್ರವೀಣಕುಮಾರ್ ಜಿ.ಎಲ್. ಸೂಚನೆ

ಕೊಪ್ಪಳ, ಅ.೨೧ (ಕ ವಾ) ಜಿಲ್ಲೆಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಆಹಾರದ ಗುಣಮಟ್ಟದ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಬಾರದು.  ಉತ್ತಮ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ನೀಡುವಂತಾಗಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನ ಕುರಿತಂತೆ ಮಂಗಳವಾರದಂದು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಜಿಲ್ಲೆಯಲ್ಲಿ ತಾವು ಪ್ರವಾಸ ಕೈಗೊಂಡ ವೇಳೆಯಲ್ಲಿ ಹಲವು ಸರ್ಕಾರಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಕೇಳಿ ಬರುತ್ತಿವೆ.  ಉತ್ತಮ ಆಹಾರ ಒದಗಿಸಲು ಅಗತ್ಯವಿರುವ ಅನುದಾನವನ್ನು ಸರ್ಕಾರ ಒದಗಿಸುತ್ತಿದ್ದು, ಆಹಾರದ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ.  ವಸತಿ ನಿಲಯಗಳಲ್ಲಿ ಆಹಾರದ ಮೆನು ಫಲಕ ಪ್ರದರ್ಶಿಸಬೇಕು  ಹಾಗೂ ಅದರಂತೆ ಆಹಾರ ಒದಗಿಸಬೇಕು.  ಮಕ್ಕಳಿಗೆ ವಸತಿ ನಿಲಯಗಳಲ್ಲಿ ಉತ್ತಮ ಊಟ, ವಸತಿ ಸೌಲಭ್ಯ ಕಲ್ಪಿಸುವುದರ ಜೊತೆಗೆ, ವ್ಯಾಸಂಗ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತಮ ವಾತಾವರಣವನ್ನು ಕಲ್ಪಿಸಬೇಕು.  ಹಾಸ್ಟೆಲ್ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ಆಟದ ಸಾಮಗ್ರಿಗಳನ್ನು ವಿತರಿಸುವ ಮೂಲಕ ಕ್ರೀಡೆಗಳಿಗೆ ಉತ್ತೇಜನ ನೀಡಬೇಕು. ಪ್ರತಿ ತಿಂಗಳಿಗೊಮ್ಮೆ ವಿದ್ಯಾರ್ಥಿಗಳು, ಶಿಕ್ಷಕರೊಂದಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ, ತಕ್ಷಣ ಪರಿಹಾರ ಕಂಡುಕೊಳ್ಳುವಂತಾಗಬೇಕು.  ಈ ನಿಟ್ಟಿನಲ್ಲಿ   ಅಗತ್ಯ ಕ್ರಮ ಜರುಗಿಸಬೇಕು ಎಂದು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಮೀನು ಖರೀದಿಸಿ : ಅಲ್ಪಸಂಖ್ಯಾತರ ಸಮುದಾಯದ ಶ್ರೇಯೋಭಿವೃದ್ಧಿಗೆ ಹಲವು ಯೋಜನೆಗಳು ಜಾರಿಗೊಂಡಿವೆ.  ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಭೂ ರಹಿತ ಅಲ್ಪಸಂಖ್ಯಾತರಿಗೆ ಭೂಮಿ ಒದಗಿಸುವ ಯೋಜನೆಗಾಗಿ, ಕೂಡಲೆ ಸಂಬಂಧಪಟ್ಟ ರೈತರಿಂದ ಜಮೀನು ಖರೀದಿಸಲು ಅಗತ್ಯ ಕ್ರಮ ಜರುಗಿಸಬೇಕು.  ಒಂದು ತಿಂಗಳ ಒಳಗಾಗಿ ಭೂಮಿ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಿ, ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ವಿತರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿಗಳು ನಿಗಮದ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಗಂಗಾ ಕಲ್ಯಾಣ ಮಾಹಿತಿ ಒದಗಿಸಿ : ಹಲವು ಅಭಿವೃದ್ಧಿ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಬಡವರ ಜಮೀನುಗಳಿಗೆ ಕೊರೆಯಿಸಲಾಗಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಬಾಕಿ ಇದ್ದು, ಹಲವು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಪದೇ ಪದೇ ಈ ವಿಷಯ ಚರ್ಚಿತವಾಗುತ್ತಿದೆ.  ಎಲ್ಲ ನಿಗಮಗಳ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ ಬಗ್ಗೆ ನಿಗಮಗಳ ವ್ಯವಸ್ಥಾಪಕರು ಹಾಗೂ ಜೆಸ್ಕಾಂನ ಸಂಬಂಧಿಸಿದ ತಾಲೂಕುಗಳ ಸಹಾಯಕ ಕಾರ್ಯ ಪಾಲಕ ಅಭಿಯಂತರರ ಜೊತೆಯಲ್ಲಿ ಸಭೆ
ಅಂಗನವಾಡಿ ಕೇಂದ್ರ ಕಲ್ಪಿಸಿ : ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳ ಸಂಖ್ಯೆಯನ್ನು ಅವಲೋಕಿಸಿದಾಗ, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸವಿರುವ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಸಂಖ್ಯೆ ಕಡಿಮೆ ಇದ್ದು, ಇಂತಹ ಸ್ಥಳಗಳನ್ನು ಗುರುತಿಸಿ, ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಬೇಕು.  ಸಾಧ್ಯವಿದ್ದಲ್ಲಿ ವಕ್ಫ್ ಆಸ್ತಿಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ಥಳಾವಕಾಶ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕ್ಫ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
     ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎನ್.ಕೆ. ತೊರವಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್, ಡಿವೈಎಸ್‌ಪಿ ರಾಜೀವ್ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ನಿಗಮಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.

ನಡೆಸಿ, ವಾರದೊಳಗೆ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳೂ ಸೂಚನೆ ನೀಡಿದರು.

Please follow and like us:
error