fbpx

ಪತ್ರಕರ್ತರಿಗಾಗಿ ಸುಸಜ್ಜಿತ ಮಾಧ್ಯಮ ಕೇಂದ್ರ

ಗಂಗಾವತಿ : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ದತೆ ನಡೆದಿದ್ದು ನಿನ್ನೆ ಮಾಧ್ಯಮ ಸಮಿತಿ ಪೂರ್ವಭಾವಿ ಸಭೆ ನಡೆಯಿತು.  ಸಮ್ಮೇಳನಕ್ಕೆ ಸರಕಾರ 2 ಕೋಟಿ ಬಿಡುಗಡೆ ಮಾಡಿದೆ. ಸಮ್ಮೇಳನಕ್ಕೆ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತಿದೆ. ಸಮ್ಮೇಳನ ಮುಂದೂಡುವ ನಿರ್ಧಾರ ಕಸಾಪ ಅಧ್ಯಕ್ಷರು ನಿರ್ಧರಿಸಬೇಕು. ಎಂದು ಶಾಸಕ ಪರಣ್ಣ ಮನವಳ್ಳಿ ಹೇಳಿದರು. 
ಸಮ್ಮೇಳನಕ್ಕೆ 200 ಕ್ಕೂ ಹೆಚ್ಚು ಪತ್ರಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಮತ್ತು ವಿವಿಧ ಟಿವಿ ಚಾನಲ್ ಗಳವರು ಭಾಗವಹಿಸಲಿದ್ದಾರೆ. ಇದಕ್ಕಾಗಿ ಸುಸಜ್ಜಿತ ಮಾಧ್ಯಮ ಕೇಂದ್ರದ ವ್ಯವಸ್ಥೆ ಮಾಡಲಾಗುತ್ತದೆ. ಸುಮಾರು 65 ಕ್ಕೂ ಹೆಚ್ಚು ಕಂಪ್ಯೂಟರ್ ಗಳನ್ನು ಮತ್ತು ಬ್ರಾಡ್ ಬ್ಯಾಂಡ್ ನೆಟ್ ವರ್ಕ ವ್ಯವಸ್ಥೆ ಮಾಡಲಾಗುತ್ತಿದೆ ಎಂದು  ಮಾಧ್ಯಮ ಸಮಿತಿ ಅಧ್ಯಕ್ಷ ತುಕಾರಾಂ ಹೇಳಿದರು.  ಸಭೆಯಲ್ಲಿ ಶರಣಪ್ಪ ಬಾಚಲಾಪೂರ,ವಿ.ಎಸ್ ಪಾಟೀಲ್ , ಬಸವರಾಜ ಕೋಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Please follow and like us:
error

Leave a Reply

error: Content is protected !!