You are here
Home > Koppal News > ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ :

ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ :

 ಅರ್ಜಿ ಆಹ್ವಾನ
 ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲಿ ಬರುವ ಜ.೦೩ ರಿಂದ ಜ.೦೬ ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಹಮ್ಮಿಕೊಂಡಿದ್ದು, ಆಸಕ್ತ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರಿಂದ ಅರ್ಜಿ ಆಹ್ವಾನಿಸಿದೆ.
ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು/ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.೧,೦೦೦/- ಗಳ ಬಾಡಿಗೆ ಹಾಗೂ ರೂ.೧,೦೦೦/- ಗಳ ಭದ್ರತಾ ಠೇವಣಿ ಒಟ್ಟು ರೂ.೨,೦೦೦/- ಗಳ ಡಿ.ಡಿ.ಯನ್ನು ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಪ್ರದರ್ಶಕರು ನಿಗದಿತ ಅರ್ಜಿ ನಮೂನೆಯನ್ನು  ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಡಿ.೦೫ ರಿಂದ ಡಿ.೧೭ ರವರೆಗೆ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಡಿ.ಡಿ.ಯೊಂದಿಗೆ ಡಿ.೨೦ ರಂದು ಸಂಜೆ ೫.೩೦ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು ಅವರ ಹೆಸರಿಗೆ ಸಲ್ಲಿಸಬಹುದಾಗಿದೆ.

Leave a Reply

Top