You are here
Home > Koppal News > ಪ್ರಶಸ್ತಿಗಾಗಿ ಯುವ ಬರಹಗಾರರಿಂದ ವಿವಿಧ ಸಾಹಿತ್ಯ ಪ್ರಕಾರದ ಪುಸ್ತಕಗಳ ಆಹ್ವಾನ

ಪ್ರಶಸ್ತಿಗಾಗಿ ಯುವ ಬರಹಗಾರರಿಂದ ವಿವಿಧ ಸಾಹಿತ್ಯ ಪ್ರಕಾರದ ಪುಸ್ತಕಗಳ ಆಹ್ವಾನ

 ಕನ್ನಡ ಸಾಹಿತ್ಯ ಪರಿಷತ್ತ ವತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಒಂದೂವರೆ ಕೋಟಿ ರೂಪಾಯಿಗಳ ದತ್ತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅರಳು ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಆಸಕ್ತ ಕನ್ನಡ ಯುವ ಬರಹಗಾರರಿಂದ ವಿವಿಧ ಸಾಹಿತ್ಯ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಆಗಸ್ಟ್ ೧೫ ೨೦೧೩ ಕ್ಕೆ ೩೫ ವರ್ಷ ಮೀರಿರದ ಕನ್ನಡ ಯುವ ಬರಹಗಾರರು ಸ್ಪರ್ಧೆಯಲ್ಲಿ ಭಾಗವಹಿಸಬಹುದು, ಈ ಸ್ಪರ್ಧೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಲ್ಕು ವಲಯಗಳ ಸಿಬ್ಬಂದಿಗಳು ಸೇರಿದಂತೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು (ಜನ್ಮ ದಿನಾಂಕದ ಅಧಿಕೃತ ದಾಖಲೆ ಲಗತ್ತಿಸಬೇಕು), ಕವನ, ಸಣ್ಣಕಥೆ, ಕಾದಂಬರಿ, ನಾಟಕ, ಲಲಿತಪ್ರಬಂಧ, ಪರಿಸರ, ವಿನೋದ ಸಾಹಿತ್ಯ, ಅನುವಾದ, ಮಕ್ಕಳ ಸಾಹಿತ್ಯ, ವಿಮರ್ಶೆ/ಸಂಶೋಧನೆ. ಈ ಹತ್ತು ಸಾಹಿತ್ಯ ಪ್ರಕಾರಗಳಲ್ಲಿ ಕನ್ನಡದಲ್ಲಿ ರಚಿಸಿದ ಪುಸ್ತಕಗಳನ್ನು ಸ್ಪರ್ಧೆಗೆ ಕಳುಹಿಸಬಹುದು, ೨೦೧೨ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಥಮ ಮುದ್ರಣವಾಗಿ ಪ್ರಕಟವಾಗಿರುವ ಪುಸ್ತಕಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು, ಪ್ರತಿ ಒಂದು ಪ್ರಕಾರಕ್ಕೆ ಪುಸ್ತಕದ ಮೂರು ಪ್ರತಿಗಳನ್ನು ಕಳುಹಿಸಬೇಕು, ಆಯ್ಕೆಯಾದ ಪುಸ್ತಕಗಳ ಕರ್ತೃಗಳಿಗೆ ರೂ.೧೫,೦೦೦/- ಗಳ ನಗದು ಮತ್ತು ಶಾಲು ಫಲತಾಂಬೂಲಗಳನ್ನು ನೀಡಿ ಗೌರವಿಸಲಾಗುವುದು. ಈ ಎಲ್ಲಾ ನಿಯಮಗಳೊಂದಿಗೆ ಅ.೩೦ ರೊಳಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-೫೬೦೦೧೮ ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೦-೨೬೬೨೩೫೮೪ ನ್ನು ಸಂಪರ್ಕಿಸಲು ಕೋರಲಾಗಿದೆ.

Leave a Reply

Top