fbpx

ಮಾ.೦೮ ರಂದು ಕಾನೂನು ಅರಿವು-ನೆರವು ಕಾರ್ಯಕ್ರಮ

 

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪೋಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ ೦೮ ರ ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ವಿಶೇಷ ಕಾನೂನು ಅರಿವು- ನೆರವು ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್.ಸುಜಾತಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಎಸ್.ಸಪ್ಪಣ್ಣವರ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ.ಪಾನಘಂಟಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ||ಎ.ರಾಜಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಸಂತಪ್ರೇಮಾ, ಜಿಲ್ಲಾ ಸರಕಾರಿ ವಕೀಲರಾದ ಬಿ.ಶರಣಪ್ಪ, ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ ಸದಸ್ಯರಾದ ಸಂಧ್ಯಾ ಮಾದಿನೂರು ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬಳಿಕ ೧೧.೩೦ ರಿಂದ ೧೨.೩೦ ರವರೆಗೆ ನಡೆಯಲಿರುವ ಮೊದಲನೇ ಅಧಿವೇಶನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಲಿರುವ ವಕೀಲರಾದ ಗೌರಮ್ಮ ದೇಸಾಯಿ ಹೆಣ್ಣುಮಕ್ಕಳನ್ನು ಕೌಟುಂಬಿಕ ಹಿಂಸೆಯಿಂದ ಸಂರಕ್ಷಿಸುವ ಕಾಯ್ದೆ-೨೦೦೫ ರ ಕುರಿತು ಹಾಗೂ ವಕೀಲ ವ್ಹಿ.ಎಮ್.ಭೂಸನೂರಮಠ ಅವರು ಹಿಂದೂ ಮಹಿಳೆ ಆಸ್ತಿ ಹಕ್ಕು ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
೧೨.೩೦ ರಿಂದ ೧.೩೦ ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಲಿರುವ ವಕೀಲರಾದ ಕಾಳಮ್ಮ ಪತ್ತಾರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಅಪರಾಧ ಕಾಯ್ದೆ ಕುರಿತು ಹಾಗೂ ವಕೀಲರಾದ ಗಾಯತ್ರಿ ಕಠಾರೆ ವರದಕ್ಷಣೆ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ರಾಜಶೇಖರ ಮಾಲಿಪಾಟೀಲ ಹಾಗೂ ವಕೀಲರಾದ ಸೌಮ್ಯ ಪದಕಿ ಕಾರ್ಯಕ್ರಮ ನಿರೂಪಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Please follow and like us:
error

Leave a Reply

error: Content is protected !!