fbpx

ಸ್ಥಬ್ದಚಿತ್ರ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾಮಂದಿರ ಶಾಲೆಗೆ ಪ್ರಥಮ ಪ್ರಶಸ್ತಿ.

ಕೊಪ್ಪಳ-01- ೬೦ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಸ್ಥಬ್ದಚಿತ್ರ ಸ್ಪರ್ಧೆಯಲ್ಲಿ ನಗರದ ಸರಸ್ವತಿ ವಿದ್ಯಾಮಂದಿರ ಶಾಲೆಯ ಭುವನೇಶ್ವರಿ ದೇವಿಯ ಸ್ತಬ್ಧ ಚಿತ್ರ ಪ್ರಥಮ ಬಹುಮಾನ ಪಡೆದಿದೆ.  ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಶಾಲೆ ಮತ್ತು ಇಲಾಖೆಗಳ ೧೫ಕ್ಕೂ ಹೆಚ್ಚು ಸ್ಥಬ್ದ ಚಿತ್ರಗಳು ಭಾಗವಹಿಸಿದ್ದವು  ಇದರಲ್ಲಿ ಸರಸ್ವತಿ ವಿದ್ಯಾಮಂದಿರದ ಭುವನೇಶ್ವರಿ ದೇವಿಯ ಸ್ಥಬ್ದ ಚಿತ್ರ ಪ್ರಥಮ ಬಹುಮಾನಕ್ಕೆ ಪಾತ್ರವಾಗಿದೆ. ಸ್ತಬ್ಧಚಿತ್ರದಲ್ಲಿ ರಾಜ್ಯದ ಸಾಂಸ್ಕೃತಿಕ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ವಿವಿಧ ವೇಷಭೂಷಣಗಳಾದ ಭುವನೇಶ್ವರಿ, ಸಂಗೋಳ್ಳಿ ರಾಯಣ್ಣ , ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಬಸವಣ್ಣ, ಕೊಡಗಿನ ಕಾವೇರಿಯ ವೇಷಭೂಷಣಗಳನ್ನು ಮಕ್ಕಳು ಧರಿಸಿದ್ದರು. ಈ ಸ್ಥಬ್ದ ಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿಯವರು ಪ್ರಥಮ ಬಹುಮಾನ ವಿತರಿಸಿದರು. ಈ ಸಂದರ್ಬದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ,ಪ್ರಭಾರಿ ಜಿಲ್ಲಾಧಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಾಲೆಯ ಕಾರ್ಯದರ್ಶಿ ಆರ್.ಎಚ್.ಅತ್ತನೂರ ಅಭಿನಂದಿಸಿದ್ದಾರೆ.
Please follow and like us:
error

Leave a Reply

error: Content is protected !!