ಚುನಾವಣೆ ನಡೆಯುವ ಪ್ರದೇಶಗಳಿಗೆ ಸಾರ್ವಜನಿಕ ರಜೆ

ರಾಜ್ಯದಲ್ಲಿ ಡಿಸೆಂಬರ್ 5 ಶುಕ್ರವಾರದಂದು ಸ್ಥಳೀಯ ಸಂಸ್ಥೆಗಳ ಸದಸ್ಯಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ ಕೇಂದ್ರ ಸರ್ಕಾರದ ಕಚೇರಿಗಳಿಗೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಾರ್ಖಾನೆ, ಶಿಕ್ಷಣ ಸಂಸ್ಥೆಗಳಿಗೆ ಎಲ್ಲ ಶಾಲಾ, ಕಾಲೇಜುಗಳಿಗೆ ಸೀಮಿತಗೊಳಿಸಿ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.  ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಈ ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು, ಸದರಿ ದಿನಾಂಕದಂದು ಚುನಾವಣಾ ಕರ್ತವ್ಯದಲ್ಲಿ ಹಾಜರಾಗಬೇಕು.
ಮತದಾನ ನಡೆಯುವ ಮತಗಟ್ಟೆಗಳನ್ನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಮಾತ್ರ ಅಂತಹ ಕಚೇರಿ, ಶಾಲೆಗಳಿಗೆ ಡಿಸೆಂಬರ್ 4ರ  ಗುರುವಾರ ಮತ್ತು ಮತ ಎಣಿಕೆಯ ದಿನದಂದು ಮತ ಎಣಿಕೆ ನಡೆಯುವ ಕೇಂದ್ರಸ್ಥಾನದಲ್ಲಿ ಮಾತ್ರ ರಜಾ ಘೋಷಿಸಲು ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುವರು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮತದಾನ ದಿನವಾದ  ಡಿಸೆಂಬರ್ 5 ರಂದು ಕಾರ್ಮಿಕರಿಗೆ ಮತದಾನಕ್ಕೆ ಅನುವು ಮಾಡಿಕೊಡಿ
ಸ್ಥಳೀಯ ಸಂಸ್ಥೆಗಳಿಗೆ ಮತದಾನ ದಿನವಾದ ಡಿಸೆಂಬರ್ 5 ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ  ಮಾತ್ರ ಮತ ಚಲಾಯಿಸಲು ಅನುಕೂಲವಾಗುವಂತೆ ಕಾರ್ಮಿಕರಿಗೆ ಸಂವಿಧಾನಾತ್ಮಕ ಮತದಾನದ ಹಕ್ಕನ್ನು ಚಲಾಯಿಸಲು ಅನುವು ಮಾಡಿಕೊಡುವಂತೆ  ರಾಜ್ಯ ಕಾರ್ಮಿಕ ಆಯುಕ್ತರು  ಕಾರ್ಖಾನೆಗಳು ಹಾಗೂ ಕೈಗಾರಿಕಾ ಸಂಸ್ಥೆಗಳ ಮಾಲೀಕರು ಮತ್ತು ಮುಖ್ಯಸ್ಥರಿಗೆ ತಿಳಿಸಿದ್ದಾರೆ.

Leave a Reply