ಅಪರ ಜಿಲ್ಲಾ ಸರ್ಕಾರಿ ವಕೀಲರಾಗಿ ಮಲ್ಲಪ್ಪ ಸಜ್ಜನ ನೇಮಕ

ಕೊಪ್ಪಳ ಡಿ.  ಕೊಪ್ಪಳ ಜಿಲ್ಲೆಯ ಅಪರ ಜಿಲ್ಲಾ ಸರ್ಕಾರಿ ವಕೀಲರನ್ನಾಗಿ ಕೊಪ್ಪಳದ ಮಲ್ಲಪ್ಪ ಬಸಪ್ಪ ಸಜ್ಜನ ಅವರನ್ನು ನೇಮಕಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
  ಅಪರ ಜಿಲ್ಲಾ ಸರ್ಕಾರಿ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್. ಸಿದ್ದರಾಮಸ್ವಾಮಿ ಅವರ ಸೇವಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೊಪ್ಪಳದ ವಕೀಲ ಮಲ್ಲಪ್ಪ ಬಸಪ್ಪ ಸಜ್ಜನ ಅವರನ್ನು ಅಪರ ಜಿಲ್ಲಾ ಸರ್ಕಾರಿ ವಕೀಲರನ್ನಾಗಿ ಮೂರು ವರ್ಷಗಳ ಅವಧಿಗೆ ನೇಮಕಗೊಳಿಸಿ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.
Please follow and like us:
error