ಗಣರಾಜ್ಯೋತ್ಸವ ದಿನಾಚರಣೆ : ಪೂರ್ವಭಾವಿ ಸಭೆ

 ಗಣರಾಜ್ಯೋತ್ಸವ ದಿನಾಚರಣೆಯನ್ನು ಜ. ೨೬ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಜ. ೦೯ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್ ಅವರು ವಹಿಸುವರು.  ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಕ್ರಮ/ಕಾಮಗಾರಿ ಕುರಿತ ಪ್ರಗತಿಯ ವರದಿ ಹಾಗೂ ಮುಖ್ಯ ಅಂಶಗಳ ಕಿರು ಟಿಪ್ಪಣಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ತಿಳಿಸಿದ್ದಾರೆ.
Please follow and like us:
error

Related posts

Leave a Comment