You are here
Home > Koppal News > ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ : ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ : ಅರ್ಜಿ ಆಹ್ವಾನ

 ಸರ್ಕಾರದ ಕೆಲಸದಲ್ಲಿ ವಿನೂತನ ಪದ್ದತಿ, ನಾಗರಿಕ ಸ್ನೇಹಿ, ಗುಣಾತ್ಮಕ, ಭ್ರಷ್ಟಾಚಾರರಹಿತ ಹಾಗೂ ಚಲನಶೀಲ ಆಡಳಿತ ನೀಡಿದ ರಾಜ್ಯ ಸರ್ಕಾರಿ ನೌಕರರಿಗೆ (ಗೃಹ ಇಲಾಖೆ ಮತ್ತು ಶಿಕ್ಷಣ ಇಲಾಖೆಯನ್ನು ಹೊರತುಪಡಿಸಿ) ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರಿ ಕರ್ತವ್ಯದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಗ್ರೂಪ್-’ಸಿ’, ಪತ್ರಾಂಕಿತ ವೃಂದದ ನೌಕರರಿಗೆ ಪ್ರತಿ ವರ್ಗದಲ್ಲಿ ತಲಾ ಇಬ್ಬರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ಸರ್ಕಾರ ಯೋಜನೆ ರೂಪಿ
ಸಿದೆ.  ಕೊಪ್ಪಳ ಜಿಲ್ಲೆಯ ಸಾರ್ವಜನಿಕರು/ಸಿಬ್ಬಂದಿಗಳು ನಾಮನಿರ್ದೇಶನಗಳನ್ನು ಜಿಲ್ಲಾಧಿಕಾರಿಗಳು ಕೊಪ್ಪಳ ಇವರಿಗೆ ಜ. ೦೮ ರೊಳಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ತಿಳಿಸಿದ್ದಾರೆ. 

Leave a Reply

Top