ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಅರ್ಜಿ ಆಹ್ವಾನ

ಕೊಪ್ಪಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಪ್ರಸಕ್ತ ಸಾಲಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ)ಯನ್ನು ಮುಂದುವರೆಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
 ಡಾ|| ನಂಜುಂಡಪ್ಪ ವರದಿಯನ್ವಯ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯನ್ನು ಕೊಪ್ಪಳ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯ ಮಾರ್ಗಸೂಚಿಯಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ೧೮ ಕ್ಕಿಂತ ಮೇಲ್ಪಟ್ಟಿರಬೇಕು, ಕನಿಷ್ಟ ೮ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಹೊಸ ಘಟಕಗಳ ಸ್ಥಾಪನೆಗೆ ಮಾತ್ರ ಅವಕಾಶವಿರುತ್ತದೆ. ಸರ್ಕಾರದ ನೀತಿಯಂತೆ ಪ.ಜಾತಿ, ಪ.ಪಂ., ಅಲ್ಪಸಂಖ್ಯಾತರ, ಅಂಗವಿಕಲರು, ಮಾಜಿ ಸೈನಿಕರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.  ಅರ್ಜಿ ಸಲ್ಲಿಸಲು ಡಿ.೨೬ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಕೊಪ್ಪಳ ದೂ.ಸಂಖ್ಯೆ: ೦೮೫೩೯-೨೩೧೧೦೧/೨೩೧೫೪೮ ಅಥವಾ ಆಯಾ ತಾಲೂಕುಗಳ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ 

Leave a Reply