ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ

  ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಮತ್ತು ಘಟ್ಟದಕೋರೆ), ಮೂಡಲಪಾಯ ಯಕ್ಷಗಾನ, ಗೊಂಬೆಯಾಟ (ಸೂತ್ರದ ಮತ್ತು ತೊಗಲುಗೊಂಬೆ), ಶ್ರೀಕೃಷ್ಣಪಾರಿಜಾತ, ಸಣ್ಣಾಟ, ದೊಡ್ಡಾಟ ಇತ್ಯಾದಿ ಕಲಾಪ್ರಕಾರಗಳಿಗೆ ಸಂಬಂಧಿಸಿದ ೨೦೧೩ರಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
      ಆಯ್ಕೆಯಾದ ಪುಸ್ತಕಕ್ಕೆ ರೂ.೫,೦೦೦/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ಮತ್ತು ಬಯಲಾಟದ ವಿವಿಧ ಆಯಾಮಗಳ ಬಗ್ಗೆ (ಸಂಗೀತ, ಆಹಾರ‍್ಯ, ಅಭಿನಯ ಇತ್ಯಾದಿ), ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನಾ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.
ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ಅ.೩೦ ರೊಳಗೆ ಅರ್ಜಿಯೊಂಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಳುಹಿಸಬಹುದು.  ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು .

Leave a Reply