ರಾಯಚೂರು ಬಂದ್.

ರಾಯಚೂರು ಐಐಟಿ ಹೋರಾಟ ಸಮಿತಿ, ಜಿಲ್ಲಾ ಕಾಂಗ್ರೆಸ್, ವಿದ್ಯಾರ್ಥಿ ಸಂಘಟನೆಗಳು,
ಕನ್ನಡಪರ ಸಂಘಟನೆಗಳು ಒಟ್ಟಾಗಿ ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಶಾಲಾ
ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ವ್ಯಾಪಾರಿಗಳು
ಸ್ವಯಂಪ್ರೇರಿತರಾಗಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ
ನೀಡಿದ್ದಾರೆ. ಜಿಲ್ಲೆಯ ಐದು ತಾಲೂಕುಗಳಲ್ಲೂ ಬಂದ್ ಬಿಸಿ ಜೋರಾಗಿದ್ದು ಕೇಂದ್ರ ಹಾಗೂ
ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಜಗದೀಶ್ ಶಟ್ಟರ್ ನೇತೃತ್ವದ
ಹಿಂದಿನ ಬಿಜೆಪಿ ಸರ್ಕಾರ ರಾಯಚೂರಿಗೆ ಐಐಟಿ ಎಂದು ಸಚಿವ ಸಂಪುಟ ಸಭೆಯಲ್ಲಿ
ನಿರ್ಣಯತೆಗೆದುಕೊಂಡಿತ್ತು. ಈಗ ಅದೇ ಪಕ್ಷ ರಾಯಚೂರು ಜಿಲ್ಲೆಗೆ ಅನ್ಯಾಯ ಮಾಡಿದೆ ಎಂದು
ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.

Leave a Reply