ಕೆ. ರೋಜ್ ಮೇರಿ ಅವರಿಗೆ ಡಾ.ಎಸ್. ರಾಧಾಕೃಷ್ಣನ್ ಪ್ರಶಸ್ತಿ ಪುರಸ್ಕಾರ

  ಕೊಪ್ಪಳ ನಗರದ ಶ್ರೀ ಶಿವಶಾಂತವೀರ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ಮಿಸ್ ಕೆ. ರೋಜ್ ಮೇರಿ ಇವರಿಗೆ ಕರ್ನಾಟಕ ಪ್ರತಿಭಾ ಅಕಾಡೆಮಿ, ಬೆಂಗಳೂರು ಅವರು ರಾಜ್ಯದ ಉತ್ತಮ ಶಿಕ್ಷಕರಿಗೆ ಕೊಡಮಾಡುವ ಭಾರತ ರತ್ನ ಡಾ. ಎಸ್. ರಾಧಾಕೃಷ್ಣನ್ ಪ್ರಶಸ್ತಿ ಪುರಸ್ಕಾರ ಲಭಿಸಿದೆ. 
  ಇತ್ತೀಚಿಗೆ ಬೆಂಗಳೂರಿನಲ್ಲಿ ಜರುಗಿದ ಶಿಕ್ಷಕ ದಿನಾಚರಣೆ ಸಂದರ್ಭದಲ್ಲಿ ಕೊಪ್ಪಳದ ಮಿಸ್ ಕೆ. ರೋಜ್ ಮೇರಿ ಅವರಿಗೆ ಈ ಪ್ರಶಸ್ತಿ ವಿತರಣೆ ಮಾಡಲಾಗಿದೆ.  ಮುಗ್ಧ ಮನಸ್ಸಿನ ವಿದ್ಯಾರ್ಥಿಗಳಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗಿಸಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಅವರಲ್ಲಿ ಆರೋಗ್ಯಪೂರ್ಣ ಸ್ಪರ್ಧಾತ್ಮಕ ಮನೋಭಾವ ಜೊತೆಗೆ ಶೈಕ್ಷಣಿಕ ಚಿಂತನೆ ಬೆಳೆಸಲು ಶ್ರಮಿಸುವ ಆದರ್ಶ ಶಿಕ್ಷಕರಿಗೆ ಕರ್ನಾಟಕ ಪ್ರತಿಭಾ ಅಕಾಡೆಮಿ, ಪ್ರತಿ ವರ್ಷ ಭಾರತ ರತ್ನ ಡಾ. ಎಸ್. ರಾಧಾಕೃಷ್ಣನ್ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.  ಕೊಪ್ಪಳದ ಕೆ. ರೋಜ್ ಮೇರಿ ಇವರ ಸಾಧನೆಗೆ ಗವಿಮಠದ ಶ್ರೀ  ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಶೀರ್ವದಿಸಿದ್ದು, ಶಾಲೆಯ ಅಧ್ಯಕ್ಷರಾದ  ಎಸ್.ಅರ್. ನವಲಿಹಿರೇಮಠ, ಕಾರ್ಯದರ್ಶಿ ಎಸ್ ಮಲ್ಲಿಕಾರ್ಜುನ, ಎಲ್ಲ ಸದಸ್ಯರು, ಆಡಳಿತಾಧಿಕಾರಿ ವಿಜಯಾ ಹಿರೇಮಠ ಹಾಗೂ ಶಾಲೆಯ ಎಲ್ಲ ಶಿಕ್ಷಕ ವರ್ಗದವರು ಅಭಿನಂದಿಸಿದ್ದಾರೆ.
Please follow and like us:
error