ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ತಡೆಗೆ ಫೆ. ೩ ರಿಂದ ತರಬೇತಿ

 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರು ಮತ್ತು ಮಕ್ಕಳ ಸಾಗಾಟ ತಡೆ ಹಾಗೂ ಬಾಲ್ಯ ವೇಶ್ಯಾ ಪದ್ಧತಿ ತಡೆಗಟ್ಟಲು ರಚಿಸಲಾಗಿರುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿ ಸದಸ್ಯರುಗಳಿಗೆ ಫೆ. ೦೩ ಮತ್ತು ೦೪ ರಂದು ಎರಡು ದಿನಗಳ ತರಬೇತಿಯನ್ನು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದೆ.
  ಮಹಿಳೆಯರು ಮತ್ತು ಮಕ್ಕಳ ಸಾಗಾಟ ನಿವಾರಣೆಗಾಗಿ ಸರ್ಕಾರ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಸದಸ್ಯರುಗಳಿಗೆ ಫೆ. ೩ ಮತ್ತು ೦೪ ರಂದು ಎರಡು ದಿನಗಳ ಕಾಲ ತರಬೇತಿಯನ್ನು ಆಯೋಜಿಸಲಾಗಿದೆ.  ಜಿಲ್ಲಾ ಮಟ್ಟದ ಸಮಿತಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸದಸ್ಯರುಗಳಾಗಿರುತ್ತಾರೆ.  ಅದೇ ರೀತಿ ತಾಲೂಕು ಮಟ್ಟದಲ್ಲಿ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಆರಕ್ಷಕ ನಿರೀಕ್ಷಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮಿತಿಯ ಸದಸ್ಯರುಗಳು.  ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿಯ ಸದಸ್ಯರುಗಳು ತರಬೇತಿ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಜಿಲ್ಲಾ ಮಟ್ಟದ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
error