You are here
Home > Koppal News > ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ : ಅರ್ಜಿ ಆಹ್ವಾನ

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ : ಅರ್ಜಿ ಆಹ್ವಾನ

 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೂತನ ಯೋಜನೆಯಾದ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಅರ್ಹ ಗ್ರಾಮೀಣ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗಾಗಿ ನಾನಾ ಕ್ರೀಡೆಗಳಲ್ಲಿ ವಿಜೇತರಾದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಪ್ರಶಸ್ತಿ ಹೊಂದಿರುವ ಕಳೆದ 5 ವರ್ಷಗಳ ಅವಧಿಯಲ್ಲಿನ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಖೋ.ಖೋ, ಥ್ರೋಬಾಲ್, ಆಟ್ಯಾಪಾಟ್ಯಾ, ಮಲ್ಲಕಂಬ, ಕ್ರೀಡೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಹೊಂದಿದ ಕಳೆದ 05 ವರ್ಷಗಳ ಅವಧಿಯ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು, ಯೋಗ, ಕುಸ್ತಿ ಮತ್ತು ಕಬಡ್ಡಿ ಕ್ರೀಡೆಗಳಿಗೆ ರಾಷ್ಟ್ರ ಮತ್ತು ಅಂತರ್‍ರಾಷ್ಟ್ರೀಯ  ಮಟ್ಟದಲ್ಲಿ 05 ವರ್ಷಗಳ ಹಿಂದಿನ ಸಾಧನೆ, ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಮಲ್ಲಕಂಬ, ಗುಂಡು ಎತ್ತುವುದು, ದೊಣ್ಣೆ ವರಸೆ ಮುಂತಾದ ಸ್ಥಳೀಯ ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸಿದ ಬಗ್ಗೆ ಪ್ರಮಾಣ ಪತ್ರ, ಪ್ರಶಸ್ತಿ ಪತ್ರ, ಛಾಯಾಚಿತ್ರ, ಪೇಪರ್ ಕಟ್ಟಿಂಗ್ಸ್, ಕ್ರೀಡೆ ನಡೆದ ಸ್ಥಳ, ದಿನಾಂಕ ಇವುಗಳ ದೃಢೀಕರಣದೊಂದಿಗೆ ಸಲ್ಲಿಸಬಹುದಾಗಿದೆ. ಈ ಎಲ್ಲಾ ಕ್ರೀಡೆಗಳಲ್ಲಿ ಪ್ರತಿನಿಧಿಸಿ ಪ್ರಶಸ್ತಿ ಪಡೆದ ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂಬುದರ ಬಗ್ಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ ಸಲ್ಲಿಸಬೇಕು.
ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯು ಪ್ರಮಾಣ ಪತ್ರ, ಪ್ರಶಸ್ತಿ ಫಲಕ, ಸಮವಸ್ತ್ರ ಹಾಗೂ ರೂ. 01 ಲಕ್ಷ ರೂ. ಗಳ ನಗದು ಬಹುಮಾನ ಹೊಂದಿರುತ್ತದೆ. ಇದಕ್ಕೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಳೇ ಮಲ್ಲೇಶ್ವರ ದೇವಸ್ಥಾನ ರಸ್ತೆ, ಕೊಪ್ಪಳ ಇಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವಕ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು ಇವರಿಗೆ ಆ.30 ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ರಾಮಕೃಷ್ಣಯ್ಯ ಮೊ.9480886475, ಕೆ.ಎಂ.ಪಾಟೀಲ್-9945555320 ಅಥವಾ ಕಛೇರಿ ದೂರವಾಣಿ ಸಂಖ್ಯೆ: 08539-201400 ಇವರನ್ನು ಸಂಪರ್ಕಿಸಬಹುದಾಗಿದೆ .

Leave a Reply

Top