ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಕಿತ್ತೂರುರಾಣಿ ಚನ್ನಮ್ಮ ಹಾಗೂ ವೀರ ಮಹಿಳೆಯ ಪ್ರಶಸ್ತಿಗಾಗಿ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ : ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಸೇವೆ ಸಲ್ಲಿಸಿರಬೇಕು. ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡಾ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟ ಪರಿಗಣನೆಗೆ ಬರಲಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುವ ವ್ಯಕ್ತಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.  ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಹಾಗೂ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಪ್ರಶಸ್ತಿ ಪ್ರದಾನವನ್ನು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅಥವಾ ಸರಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪಡಿಸಲಾಗುವುದು. ಪ್ರಶಸ್ತಿಯನ್ನು ಖುದ್ದಾಗಿ ಆಯ್ಕೆಯಾದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯು ಸಂಸ್ಥೆಯ ಪದಾಧಿಕಾರಿಗಳು ಸ್ವೀಕರಿಸಬಹುದು.
ವೀರ ಮಹಿಳೆ : ಮಹಿಳೆಯು ಅಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ದೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದಲ್ಲಿ ಅಂತಹ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಲಾಗುವುದುದು.  ಅರ್ಜಿ ಸಲ್ಲಿಸಲು ೧೮ ರಿಂದ ೪೫ ವರ್ಷದೊಳಗಿರಬೇಕು.   ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ೨೦೧೩ ರ ಜನವರಿ ೦೧ ರಿಂದ ಡಿಸೆಂಬರ್ ೩೧ ರವರೆಗಿನ ಸಾಧನೆಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಈ ಪ್ರಶಸ್ತಿಗಾಗಿ ಸಂಬಂಧಿಸಿದ ಮಹಿಳೆಯ ತಂದೆ, ತಾಯಿ, ಪೋಷಕರು ಅರ್ಜಿ ಸಲ್ಲಿಸಬಹುದಾಗಿದೆ.  ಪ್ರಶಸ್ತಿಯು ೧೦ ಸಾವಿರ ರೂ. ನಗರದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.  ಅರ್ಜಿ ಸಲ್ಲಿಸಲು ನ.೨೮ ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು .

Related posts

Leave a Comment