fbpx

ಡಿ.೨೮ ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಕೊಪ್ಪಳ ಡಿ.೨೬  ಜಿಲ್ಲಾಡಳಿತ, ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಮತ್ತು ಬಾಲಕರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ.೨೮ ರಂದು ಮಧ್ಯಾಹ್ನ ೩.೦೦ ಗಂಟೆಗೆ ಬಾ.ಸ.ಪ.ಪೂ.ಕಾಲೇಜ ಆವರಣದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಅವರು ವಹಿಸುವರು. 
ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಅವರು ಆಗಮಿಸುವರು. ಅತಿಥಿ ಮತ್ತು ಗ್ರಾಹಕರ ಜಾಗೃತಿ ಸಂದೇಶಕರಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಸದಸ್ಯರಾದ ಶಿವರೆಡ್ಡಿಗೌಡ, ವೇದಾ ಜೋಷಿ, ಎಸ್.ಒ.ಕಾನೂನು ಮಾಪನಶಾಸ್ತ್ರ ಇಲಾಖೆಯ ಜಯಕುಮಾರ, ಉಪನ್ಯಾಸಕರಾಗಿ ಸರಕಾರಿ ಅಭಿಯೋಜಕ ಹಾಗೂ ಪ್ರಭಾರಿ ಕಾನೂನು ಅಧಿಕಾರಿ ಬಿ.ಎಸ್.ಪಾಟೀಲ್ ಅವರು ಆಗಮಿಸುವರು ಎಂದು ಪ್ರಾಚಾರ್ಯ ಡಾ|| ಹನುಮಂತಪ್ಪ ನೀರಗೇರಿ  ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!