ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆ : 
 ಕೊಪ್ಪಳ ಲೋಕಸಭಾ ಚುನಾವಣೆ ಅಂಗವಾಗಿ ಶುಕ್ರವಾರ ಇಬ್ಬರು ಅಭ್ಯರ್ಥಿಗಳಿಂದ ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.
  ರಾಯಚೂರು ಜಿಲ್ಲೆ ಮಾನವಿ ಪಟ್ಟಣದ ವಿ. ಗೋವಿಂದ ತಂದೆ ಸುಬ್ಬಣ್ಣ ಎಂಬುವವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ ಹಾಗೂ ಬಳ್ಳಾರಿಯ ಸುರೇಶ್ ತಂದೆ ಮಲ್ಲಿಕಾರ್ಜುನ ಎಂಬುವವರು ಪಕ್ಷೇತರ ಅಭ್ಯರ್ಥಿಯಾಗಿ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

Leave a Reply