ಕರ್ತವ್ಯದಲ್ಲಿ ನಿರ್ಲಕ್ಷ್ಯ : ಕುಷ್ಟಗಿ ತಾಲೂಕಿನ ೦೬ ಪಿಡಿಓ ಗಳು ಅಮಾನತು

 ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಕುಷ್ಟಗಿ ತಾಲೂಕಿನ ೦೬ ಗ್ರಾಮ ಪಂಚಾಯತಿಗಳ ಪಿಡಿಓಗಳನ್ನು ಅಮಾನತುಗೊಳಿಸಿ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಆದೇಶ ಹೊರಡಿಸಿದ್ದಾರೆ.
ತುಗ್ಗಲಡೋಣಿ : ಉದ್ಯೋಗಖಾತ್ರಿ ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಗಿಡಗಳನ್ನು ನೆಡಲಾಗಿಲ್ಲ.  ಕೇವಲ ೬೦ ಶೌಚಾಲಯಗಳನ್ನು ನಿರ್ಮಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಎಂಐಎಸ್‌ನಲ್ಲಿ ೧೦ ಶೌಚಾಲಯಗಳ ಮಾಹಿತಿ ದಾಖಲಿಸಲಾಗಿದೆ.  ಗಾಂಧಿ ಸಾಕ್ಷಿ ತಂತ್ರಾಂಶದಲ್ಲಿ ಯಾವುದೇ ಕಾಮಗಾರಿಗಳನ್ನು ದಾಖಲಿಸಿಲ್ಲ.  ಈ ರೀತಿ ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಲ್ಲಿನ ಪಿಡಿಓ ಶಂಕ್ರಪ್ಪ ಅರ್ಜುನಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
ಯರಗೇರಾ : ಉದ್ಯೋಗಖಾತ್ರಿ ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಗಿಡಗಳನ್ನು ನೆಡಲಾಗಿಲ್ಲ.  ಕೇವಲ ೫೬ ಶೌಚಾಲಯಗಳನ್ನು ನಿರ್ಮಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಎಂಐಎಸ್‌ನಲ್ಲಿ ಯಾವುದೇ ಮಾಹಿತಿ ದಾಖಲಾಗಿಲ್ಲ.  ಗಾಂಧಿ ಸಾಕ್ಷಿ ತಂತ್ರಾಂಶದಲ್ಲಿ ಯಾವುದೇ ಕಾಮಗಾರಿಗಳನ್ನು ದಾಖಲಿಸಿಲ್ಲ.  ಈ ರೀತಿ ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಲ್ಲಿನ ಪಿಡಿಓ  ಮಲಕಣ್ಣ ಅಂಕಲಗಿ ಅವರನ್ನು ಅಮಾನತುಗೊಳಿಸಲಾಗಿದೆ.
ಜಾಗೀರ ಗುಡದೂರ : ಉದ್ಯೋಗಖಾತ್ರಿ ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಗಿಡಗಳನ್ನು ನೆಡಲಾಗಿಲ್ಲ.  ಕೇವಲ ೫೦ ಶೌಚಾಲಯಗಳನ್ನು ನಿರ್ಮಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಎಂಐಎಸ್‌ನಲ್ಲಿ ೦೩ ಶೌಚಾಲಯಗಳ ಮಾಹಿತಿ ದಾಖಲಿಸಲಾಗಿದೆ.  ಗಾಂಧಿ ಸಾಕ್ಷಿ ತಂತ್ರಾಂಶದಲ್ಲಿ ಯಾವುದೇ ಕಾಮಗಾರಿಗಳನ್ನು ದಾಖಲಿಸಿಲ್ಲ.  ಈ ರೀತಿ ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಲ್ಲಿನ ಪಿಡಿಓ ಮುತ್ತಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
ನಿಲೋಗಲ್ : ಉದ್ಯೋಗಖಾತ್ರಿ ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಗಿಡಗಳನ್ನು ನೆಡಲಾಗಿಲ್ಲ.  ಕೇವಲ ೧೫ ಶೌಚಾಲಯಗಳನ್ನು ನಿರ್ಮಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಎಂಐಎಸ್‌ನಲ್ಲಿ  ಯಾವುದೇ ಮಾಹಿತಿ ದಾಖಲಾಗಿಲ್ಲ.   ಗಾಂಧಿ ಸಾಕ್ಷಿ ತಂತ್ರಾಂಶದಲ್ಲಿ ಯಾವುದೇ ಕಾಮಗಾರಿಗಳನ್ನು ದಾಖಲಿಸಿಲ್ಲ.  ಈ ರೀತಿ ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಲ್ಲಿನ ಪಿಡಿಓ ನಿಂಗಪ್ಪ ಬಂಡರಗಲ್ ಅವರನ್ನು ಅಮಾನತುಗೊಳಿಸಲಾಗಿದೆ.
ಬಿಜಕಲ್ : ಉದ್ಯೋಗಖಾತ್ರಿ ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಗಿಡಗಳನ್ನು ನೆಡಲಾಗಿಲ್ಲ.  ಕೇವಲ ೧೮ ಶೌಚಾಲಯಗಳನ್ನು ನಿರ್ಮಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಎಂಐಎಸ್‌ನಲ್ಲಿ  ಯಾವುದೇ ಮಾಹಿತಿ ದಾಖಲಾಗಿಲ್ಲ.   ಗಾಂಧಿ ಸಾಕ್ಷಿ ತಂತ್ರಾಂಶದಲ್ಲಿ ಯಾವುದೇ ಕಾಮಗಾರಿಗಳನ್ನು ದಾಖಲಿಸಿಲ್ಲ.  ಈ ರೀತಿ ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಲ್ಲಿನ ಪಿಡಿಓ  ಮಲ್ಲಿಕಾರ್ಜುನ ಅವರನ್ನು ಅಮಾನತುಗೊಳಿಸಲಾಗಿದೆ.
ಅಡವಿಬಾವಿ : ಉದ್ಯೋಗಖಾತ್ರಿ ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಗಿಡಗಳನ್ನು ನೆಡಲಾಗಿಲ್ಲ.  ಕೇವಲ ೮೦ ಶೌಚಾಲಯಗಳನ್ನು ನಿರ್ಮಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಎಂಐಎಸ್‌ನಲ್ಲಿ  ೧೨ ಶೌಚಾಲಯಗಳ ಮಾಹಿತಿ ದಾಖಲಿಸಲಾಗಿದೆ.    ಗಾಂಧಿ ಸಾಕ್ಷಿ ತಂತ್ರಾಂಶದಲ್ಲಿ ೦೪ ಕಾಮಗಾರಿಗಳನ್ನು ಮಾತ್ರ ದಾಖಲಿಸಲಾಗಿದೆ.  ಈ ರೀತಿ ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಲ್ಲಿನ ಪಿಡಿಓ  ಚಂದಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
  ಗ್ರಾಮ ಪಂಚಾಯತಿಗಳ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪಿಡಿಓಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಆದೇಶದಲ್ಲಿ ತಿಳಿಸಿದ್ದಾರೆ.

Related posts

Leave a Comment