You are here
Home > Koppal News > ಸದ್ಭಾವನ ದಿನ: ಅಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

ಸದ್ಭಾವನ ದಿನ: ಅಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

 ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸೂಚನೆಯಂತೆ ಆ. ೨೦ ರ ದಿನವನ್ನು ಸದ್ಭಾವನಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಅಧಿಕಾರಿ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪ್ರಮಾಣ ವಚನ ಬೋಧಿಸಿದರು.
    ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಬಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿ ವರ್ಷ ಆ.೨೦ ರಂದು ಸದ್ಭಾವನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಸದ್ಭಾವನಾ ದಿನದ ಅಂಗವಾಗಿ ’ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೆ, ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸಲಾಗುವುದು.  ಅಲ್ಲದೆ ವಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ನಮ್ಮಲ್ಲಿರುವ ಎಲ್ಲ ಬೇಧ ಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ, ಸಮಾಲೋಚನೆ ಮತ್ತು ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆ’ ಎಂಬುದಾಗಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಡಿಡಿಪಿಐ ಜಿ.ಹೆಚ್. ವೀರಣ್ಣ, ಸೇರಿದಂತೆ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದು, ಪ್ರತಿಜ್ಞಾ ವಿಧಿ ಸ್ವೀಕರಿಸಿದರು

Leave a Reply

Top