ಚುನಾವಣೆ : ಮತಕ್ಷೇತ್ರದಲ್ಲಿ ಸಾರ್ವತ್ರಿಕ ರಜೆ

  ನಗರ, ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮಾ. ೦೭ ರಂದು ಮತದಾನ ನಡೆಯಲಿದ್ದು, ಸಂಬಂಧಪಟ್ಟ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಿಸಿದೆ.
  ಚುನಾವಣೆ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ  ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ), ರಾಷ್ಟ್ರೀಕೃತ ಬ್ಯಾಂಕ್‌ಗಳು, ಇತರೆ ಬ್ಯಾಂಕ್‌ಗಳು, ಜೀವ ವಿಮಾ ನಿಗಮ ಮುಂತಾದ ಕಚೇರಿಗಳಿಗೆ ಮಾ. ೦೭ ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ.  ಅದೇ ರೀತಿ ಯಾವುದೇ ಬಿಸಿನೆಸ್ ಟ್ರೇಡ್, ಇಂಡಸ್ಟ್ರೀಯಲ್ ಅಂಡರ್‌ಟೇಕಿಂಗ್ ಅಥವಾ ಇನ್ನಿತರ ಎಸ್ಟಾಬ್ಲಿಷ್‌ಮೆಂಟ್‌ಗಳಲ್ಲಿ ಮತ್ತು ದಿನಗೂಲಿ   ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಮತದಾನ ದಿನಾಂಕದಂದು ವೇತನ ಸಹಿತ ರಜೆಗೆ ಅರ್ಹರಿರುವುದಾಗಿ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ  ತಿಳಿಸಿದ್ದಾರೆ.
Please follow and like us:
error