ಉಚಿತ ಹೈನುಗಾರಿಕೆ ತರಬೇತಿ ಶಿಬಿರ.

ಕೊಪ್ಪಳ, ಏ.೨೭ (ಕರ್ನಾಟಕ ವಾರ್ತೆ): ಬಾಗಲಕೋಟೆಯ
ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದ ವತಿಯಿಂದ ಮೂರು ದಿನಗಳ ಹೈನುಗಾರಿಕೆ ತರಬೇತಿ
ಶಿಬಿರವನ್ನು ಬಾಗಲಕೋಟೆಯಲ್ಲಿ ೨೦೧೫ರ ಮೇ ತಿಂಗಳಿನಲ್ಲಿ ಆಯೋಜಿಸಲಾಗಿದೆ.
ಹೈನುಗಾರಿಕೆಯಲ್ಲಿ
ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ
ವಿಷಯಗಳ ಬಗ್ಗೆ ಶಿಬಿರದಲ್ಲಿ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ
ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತ ರೈತರು,
ಸ್ವಸಹಾಯ ಸಂಘದ ಸದಸ್ಯರು, ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ ಅಥವಾ ಮೊಬೈಲ್
ಸಂಖ್ಯೆ ಇತ್ಯಾದಿ ವಿವರಗಳನ್ನು ಮೇ.೦೬ ರೊಳಗಾಗಿ ನೋಂದಾಯಿಸಬಹುದಾಗಿದೆ. ಹೆಚ್ಚಿನ
ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ,
ಬಿ.ವಿ.ವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ-೫೮೭೧೦೩.
ಮೊ.೯೪೮೨೬೩೦೭೯೦ ನ್ನು ಸಂಪರ್ಕಿಸಬಹುದಾಗಿದೆ.

Leave a Reply