ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

 ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಧೆಗಳಿಗೆ ಪ್ರೋತ್ಸಾಹಧನ ನೀಡಲು ಜಿಲ್ಲೆಯ ಅರ್ಹ ಸಂಘ ಸಂಸ್ಧೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
  ನೊಂದಾಯಿತ ಹಾಗೂ ಸಕ್ರಿಯ ಅರ್ಹ ಸಂಘ ಸಂಸ್ಧೆಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸಂಸ್ಧೆಗಳು ನಿಗದಿತ ಅರ್ಜಿ ನಮೂನೆ ಹಾಗೂ ನಿಯಮಾವಳಿಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇವರಿಂದ ಪಡೆದು ಎಲ್ಲಾ ವಿವರಗಳೊಂದಿಗೆ ಆ.30 ರೊಳಗಾಗಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 08539-221417 ಸಂಪರ್ಕಿಸಬಹುದಾಗಿದೆ .

Leave a Reply