ನೌಕರರ ಕ್ರೀಡಾಕೂಟ ರಾಜ್ಯಮಟ್ಟಕ್ಕೆ ಆಯ್ಕೆ.

ಕೊಪ್ಪಳ,
ಡಿ.೦೯ (ಕ ವಾ)  ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ
ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ವಿವಿಧ ಕ್ರೀಡಾಕೂಟಗಳಲ್ಲಿ
ಭಾಗವಹಿಸಿದ್ದ ಆರೋಗ್ಯ ಇಲಾಖೆ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದ ‘ಡಿ’
ಗ್ರೂಪ್ ನೌಕರ ರಾಜು ಅವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
    
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಗುಂಡು ಎಸೆತ ಮತ್ತು ಚಕ್ರ ಎಸೆತ
ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿರುವ ರಾಜು ಅವರು ವೀರಾಗ್ರಣಿ ಪ್ರಶಸ್ತಿಯೊಂದಿಗೆ
ರಾಜ್ಯಮಟ್ಟದ ಕ್ರೀಡಾಕೂಟಗಳಿಗೆ ಅರ್ಹತೆ ಪಡೆದಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ
ರಾಜು ಅವರ ಸಾಧನೆಗೆ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳ
ಕಾರ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾ ಸರ್ಕಾರಿ ‘ಡಿ’ ಗ್ರೂಪ್ ನೌಕರರ
ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Please follow and like us:
error