ರಾಜ್ಯ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು ಸೂಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ರಾಜ್ಯ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ೨ ವ್ಯಕ್ತಿಗಳಿಗೆ ತಲಾ ರೂ.೨೫,೦೦೦/- ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ೨ ಸಂಸ್ಥೆಗಳಿಗೆ ತಲಾ ರೂ.೧.೦೦ ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗಲಿದ್ದು, ಆಸಕ್ತ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ.
    ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಪ್ಪಳ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇವರಿಗೆ ಆ.೧೬ ರೊಳಗಾಗಿ ಸಲ್ಲಿಸಬಹುದಾಗಿದೆ.
Please follow and like us:
error

Related posts

Leave a Comment