ಛಂದ ಪುಸ್ತಕ ಆಹ್ವಾನ

ಕಳೆದ ಏಳು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2011ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ.ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು ಕಳುಹಿಸಬೇಕು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವದಿಲ್ಲ.ಆಯ್ಕೆಯಾದ ಕತೆಗಾರರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ.ಈ ಪುಸ್ತಕವನ್ನು 2012ರ ಫೆಬ್ರವರಿ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ. ಕತೆಗಳನ್ನು ಕಳಿಸಬೇಕಾದ ವಿಳಾಸ:ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560 076 (ದೂ. 98444 22782)ಕೊನೆಯ ದಿನಾಂಕ: ಜನವರಿ 10, 2012ಹೆಚ್ಚಿನ ವಿವರಗಳಿಗೆ: vas123u@yahoo.com  
Please follow and like us:
error