fbpx

ನ.೨೧ ರಿಂದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಕೊಪ್ಪಳ, ನ.೧೭ (ಕರ್ನಾಟಕ
ವಾರ್ತೆ) ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ ಕೊಪ್ಪಳ ಇವರಿಂದ
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ನ.೨೧ ಮತ್ತು  ೨೨ ರಂದು ನಗರದ ಬಾಲಕರ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
        ನ.೨೧ ರಂದು
ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಡೆಯಲಿದ್ದು,
ನ.೨೨ ರಂದು ಪ್ರೌಢ ಶಾಲಾ ವಿಭಾಗದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು
ನಡೆಯಲಿವೆ. ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ
ವಿದ್ಯಾರ್ಥಿಗಳು ಈ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ
ಭಾಗವಹಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು
ತಿಳಿಸಿದ್ದಾರೆ. 
Please follow and like us:
error

Leave a Reply

error: Content is protected !!