ಜ. ೨೩ ರಂದು ಕುಷ್ಟಗಿ ತಾಲೂಕು ಕ್ರೀಡಾಂಗಣದ ಉದ್ಘಾಟನೆ

ಕೊಪ್ಪಳ ಜ. ೨೧  ಕುಷ್ಟಗಿ ತಾಲೂಕು ಕ್ರೀಡಾಂಗಣದ ಉದ್ಘಾಟನೆ ಜ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಕುಷ್ಟಗಿ ತಾಲೂಕು ಕ್ರೀಡಾಂಗಣ ಆವರಣದಲ್ಲಿ ನೆರವೇರಲಿದೆ.
  ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಕ್ರೀಡಾಂಗಣದ ಉದ್ಘಾಟನೆ ನೆರವೇರಿಸುವರು.  ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಸಂಗಣ್ಣ ಕರಡಿ, ಈಶಣ್ಣ ಗುಳಗಣ್ಣವರ್, ಶಿವರಾಜ ತಂಗಡಗಿ, ಪರಣ್ಣ ಮುನವಳ್ಳಿ, ವಿಧಾನಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ್, ಶಶಿಲ್ ನಮೋಶಿ, ಅಮರನಾಥ ಪಾಟೀಲ್, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಮಹಾಂತಗೌಡ ಪಾಟೀಲ್, ಕಾಡಾ ಅಧ್ಯಕ್ಷ ಎಚ್. ಗಿರೇಗೌಡ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಕುಷ್ಟಗಿ ಪುರಸಭೆ ಅಧ್ಯಕ್ಷೆ ಕಾಳಮ್ಮ ಬಡಿಗೇರ, ತಾ.ಪಂ. ಅಧ್ಯಕ್ಷ ಶರಣು ತಳ್ಳುಕೇರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಎಂ.ಕೆ. ಬಲದೇವಕೃಷ್ಣ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
Please follow and like us:
error