ಗದಗ: ಬಾಲಕಿಯ ಮೇಲೆ ಅತ್ಯಾಚಾರ

 ಗದಗ, ನ. 30: ಎರಡು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಗದಗ ತಾಲೂಕಿನ ಹೊಂಬಲ ಗ್ರಾಮದಲ್ಲಿ ರವಿವಾರ ವರದಿಯಾಗಿದೆ.
ಅತ್ಯಾಚಾರ ಆರೋಪಿಯನ್ನು ಪ್ರವೀಣ್‌ (21) ಎಂದು ಗುರುತಿಸಲಾಗಿದೆ. ಈತ ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದಾಗ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಈ ಘಟನೆಯಿಂದ ಅಸ್ವಸ್ಥಳಾದ ಬಾಲಕಿಯನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply