You are here
Home > Koppal News > ಎಐಟಿಯುಸಿ ಪ್ರತಿಭಟನೆ

ಎಐಟಿಯುಸಿ ಪ್ರತಿಭಟನೆ

ಕೊಪ್ಪಳ: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ರೈಲ್ವೆ ನಿಲ್ದಾಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಸಿಯೂಟ ಯೋಜನೆ ನೌಕರರು, ಅಂಗನವಾಡಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಅಶೋಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ವ್ಯಕ್ತಪಡಿಸಿದ ಕಾರ್ಯಕರ್ತರು ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಬಸವರಾಜ ಶೀಲವಂತರ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು, ಇದರಿಂದಾಗಿ ಸಾಮಾನ್ಯ ಜನರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ದೂರಿದರು.
ಮಹಿಳಾ ಉದ್ಯೋಗಿಗಳಿಗೆ ಗೌರವಧನ ಹೆಚ್ಚಿಸಬೇಕು, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ತನಿಖೆ ನಡೆಸಬೇಕು, ಜಿಲ್ಲೆಯಲ್ಲಿ ಕೂಡಲೇ ಬರ ಪರಿಹಾರ ಕಾಮಗಾರಿ ಆರಂಭಿಸಬೇಕು, ಭೂಸ್ವಾಧೀನದ ಹೆಸರಿನಲ್ಲಿ ಭೂಮಿ ಕಬಳಿಕೆಯನ್ನು ನಿಲ್ಲಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ರಾಷ್ಟ್ರಪತಿ ಪ್ರತಿಭಾ ಪಾಟೀಲ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು.
ಮುಖಂಡರಾದ ಶಿವಾನಂದ ಹೊದ್ಲೂರು, ನನ್ನೂಸಾಬ್ ನೀಲಿ, ಮುತ್ತು ಹಡಪದ, ಮುಮ್ತಾಜ್ ಬೇಗಂ, ಜಾನಕಿ ಶೀಲವಂತರ, ಅಕ್ಕಮ್ಮ, ಅನ್ನಪೂರ್ಣಮ್ಮ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು

Leave a Reply

Top