ಅಳವಂಡಿಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಂದ ಜನಸಂಪರ್ಕ ಸಭೆ

  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಫೆ. ೧೦ ರಂದು ಅಳವಂಡಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ ಕೈಗೊಳ್ಳಲು ಜನಸಂಪರ್ಕ ಸಭೆ ನಡೆಸಲಿದ್ದಾರೆ.
  ಅಂದು ಬೆಳಿಗ್ಗೆ ೧೧ ಗಂಟೆಗೆ ಅಳವಂಡಿಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ತಾಲೂಕಾ ಪಂಚಾಯತಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ವಹಿಸುವರು.  ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ನಂತರ ಅಳವಂಡಿ ಹೋಬಳಿ ಮಟ್ಟದ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆಯನ್ನು ಅಧಿಕಾರಿಗಳ ಸಮಕ್ಷಮದಲ್ಲಿ ನಡೆಸುವರು.  ಅಳವಂಡಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಬಹುದಾಗಿದೆ .

Leave a Reply