fbpx

ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

ಕೊಪ್ಪಳ, ಮಾ. : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಾಧ್ಯಮಿಕ/ಪ್ರೌಢ ಶಾಲೆಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಪ್ರತಿಭಾವಂತ ಕ್ರೀಡಾ ವಿದ್ಯಾರ್ಥಿಗಳಿಗೆ ೨೦೧೪ನೇ ಸಾಲಿನ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
  ಅರ್ಜಿದಾರರು ೨೦೧೪ ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ೨೦೧೪ ರ ಜ. ೦೧ ರಿಂದ ಡಿ. ೩೧ ರವರೆಗೆ ನಡೆಸಿರುವ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿದವರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. 
  ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟ ಹಾಗೂ ಮಹಿಳಾ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಗ್ರಾಮೀಣ/ಮಹಿಳಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ. 
  ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಕ್ರೀಡಾ ವಿದ್ಯಾರ್ಥಿ ವೇತನ ವಾರ್ಷಿಕ ರೂ.೧೦,೦೦೦/- ಮಾತ್ರ ಪಡೆಯಬಹುದಾಗಿದೆ. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ಏ.೨೫ ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ ೦೮೫೩೯-೨೦೧೪೦೦ ಕ್ಕೆ ಸಂಪರ್ಕಿಸಬಹುದು .
Please follow and like us:
error

Leave a Reply

error: Content is protected !!