ಸ್ವಾತಂತ್ರ್ಯ ದಿನಾಚರಣೆ ಸಾಂಸ್ಕೃತಿಕ ಕಾರ್ಯಕ್ರಮ : ಆ.೧೩ ರಂದು ಪ್ರದರ್ಶನಕ್ಕೆ ಸೂಚನೆ

 ಪ್ರತಿವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಅಂದು ಏರ್ಪಡಿಸಲಾಗುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತಂಡಗಳನ್ನು ಆಯ್ಕೆ ಮಾಡಬೇಕಾಗಿದ್ದು, ಇದಕ್ಕಾಗಿ ಪೂರ್ವಭಾವಿಯಾಗಿ ಅಂತಹ ತಂಡಗಳು ಆ.೧೩ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಆಯ್ಕೆ ಸಮಿತಿ ಮುಂದೆ ಪ್ರದರ್ಶನ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕೃತಿಕ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಎಲ್ಲಾ ಪ್ರಾಥಮಿಕ, ಪ್ರೌಢ, ಕಾಲೇಜು, ಡಿ.ಇ.ಡಿ, ಬಿ.ಈಡಿ ಕಾಲೇಜು ಪ್ರಾಚಾರ್ಯರು ಹಾಗೂ ಮುಖ್ಯೋಪಾಧ್ಯಾಯರು ತಮ್ಮ ಶಾಲಾ/ಕಾಲೇಜಿನಿಂದ ನೀಡುವ ಕಾರ್ಯಕ್ರಮಗಳಾದ ದೇಶಭಕ್ತಿಗೀತೆ, ಜಾನಪದ ಗೀತೆಗಳು, ಸಾಮೂಹಿಕ ನೃತ್ಯಗಳಿಗೆ ಅವಕಾಶವಿದ್ದು, ಎಲ್ಲಾ ಶಾಲಾ ಕಾಲೇಜುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಶಾಲೆಯ ಮಕ್ಕಳ ಯಾದಿಯೊಂದಿಗೆ ಆ.೧೨ ರೊಳಗಾಗಿ ಪ್ರೌಢ ಶಾಲಾ ವಿಭಾಗದವರು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಗೀತ ಶಿಕ್ಷಕ ಸದಾಶಿವ ಪಾಟೀಲ್ ಹಾಗೂ ಪ್ರಾಥಮಿಕ ಶಾಲಾ ವಿಭಾಗದವರು ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಗೀತ ಶಿಕ್ಷಕ ಯಮನೂರಪ್ಪ ಇವರಲ್ಲಿ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು  ತಿಳಿಸಿದೆ. 

Leave a Reply