ನಾಳೆ ಜೆಡಿಎಸ್ ಪಕ್ಷದ ಪ್ರಚಾರ ಕಾರ್ಯಾಲಯ ಉದ್ಘಾಟನೆ

ಕೊಪ್ಪಳ, ಏ.೦೭: ನಗರ ಹೊರವಲಯದ ಹೊಸಪೇಟೆ ರಸ್ತೆಯ ಕಾರ್ಗಿಲ್ ಪೆಟ್ರೋಲ್ ಬಂಕ್  ಪಕ್ಕದ ಕವಲೂರು ಲೇಔಟ್‌ನಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಪ್ರಚಾರ ಕಾರ್ಯಾಲಯ ಉದ್ಘಾಟನೆ ಇದೇ ದಿ. ೯ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನೇರವೇರಲಿದೆ.
ಕಾರ್ಯಾಲಯದ ಉದ್ಘಾಟನೆಯಲ್ಲಿ ಮಾಜಿ ಸಚಿವ,  ಪಕ್ಷದ ಹೈ-ಕ ವಿಭಾಗ ಉಸ್ತುವಾರಿ ವಹಿಸಿರುವ ಇಕ್ಬಾಲ್ ಅನ್ಸಾರಿ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಡಿ. ಖಾದ್ರಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್, ತಾಲೂಕಾಧ್ಯಕ್ಷ ಅಂದಪ್ಪ ಮರೆಬಾಳ, ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಯುವ ಘಟಕ ಜಿಲ್ಲಾಧ್ಯಕ್ಷ ಹೆಚ್. ರಮೇಶ ಓಳಬಳ್ಳಾರಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಜನಪ್ರತಿನಿಧಿಗಳು, ಪ್ರಮುಖ ಕಾರ್ಯಕರ್ತರು  ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Related posts

Leave a Comment