fbpx

ಜ.೦೮ ರಂದು ಡಾ|| ಬಾಬು ಜಗಜೀವನರಾಂ ಭವನ ಅಡಿಗಲ್ಲು ಸಮಾರಂಭ

ಕೊಪ್ಪಳ ಜ.೦೭  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.೦೮ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಹಿರೇಸಿಂದೋಗಿ ರಸ್ತೆ ಕೊಪ್ಪಳದಲ್ಲಿ ಡಾ|| ಬಾಬು ಜಗಜೀವನರಾಂ ಭವನದ ನೂತನ ಕಟ್ಟಡದ ಅಡಿಗಲ್ಲು ಸಮಾರಂಭ ಜರುಗಲಿದೆ.
ರಾಜ್ಯ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅವರು ಡಾ. ಬಾಬು ಜಗಜೀವನರಾಂ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ, ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ್ ಬಯ್ಯಾಪುರ, ಶಿವರಾಜ ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ.ಅದ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ನಗರಸಬೆ ಅಧ್ಯಕ್ಷ ಸುರೇಶ ದೇಸಾಯಿ, ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್, ತಾ.ಪಂ.ಉಪಾಧ್ಯಕ್ಷೆ ಸುಜಾತ ಮಹೇಂದ್ರಗೌಡ ಮಾಲಿ ಪಾಟೀಲ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಅವರು ಭಾಗವಹಿಸುವರು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ಹೆಚ್.ಅಂಗಡಿ  ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!