You are here
Home > Koppal News > ಕೊಪ್ಪಳ ಜಿಲ್ಲಾಡಳಿತದಿಂದ ಡಾ. ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ.

ಕೊಪ್ಪಳ ಜಿಲ್ಲಾಡಳಿತದಿಂದ ಡಾ. ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ.

ಕೊಪ್ಪಳ ಡಿ. ೦೬ (ಕ ವಾ) ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರದಂದು ಆಚರಿಸಲಾಯಿತು.
     ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಟಿ. ಕೊಟ್ರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಬಿ. ಕಲ್ಲೇಶ್, ತಹಸಿಲ್ದಾರ್ ಪುಟ್ಟರಾಮಯ್ಯ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Leave a Reply

Top