ಜೂ.೧೪ ರಂದು ಜಿ.ಪಂ. ಸಾಮಾನ್ಯ ಸಭೆ

  ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಜೂ.೧೪ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
 ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷರು ವಹಿಸುವರು.  ಸಭೆಯಲ್ಲಿ ಪ್ರಸಕ್ತ ಸಾಲಿನ ಜಿ.ಪಂ. ಕ್ರಿಯಾ ಯೋಜನೆಗಳ ಚರ್ಚೆ ಮತ್ತು ಅನುಮೋದನೆ, ಜಿಲ್ಲೆಯಲ್ಲಿನ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ, ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕ ವಿತರಣೆ ಹಾಗೂ ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ದಿನಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ತಿಳಿಸಿದ್ದಾರೆ.
Please follow and like us:
error