ಬಿಜೆಪಿ ಅಕ್ರಮಗಳ ಬಗ್ಗೆ ತೀವ್ರ ನಿಗಾಬೇಕು- ಜಿ.ಪರಮೇಶ್ವರ

ಕೊಪ್ಪಳ :  ಉಪಚುನಾವಣೆಯನ್ನು ಗೆಲ್ಲಲೇ ಬೇಕು ಹಟ ತೊಟ್ಟಿರುವ ಬಿಜೆಪಿ ಅಪಾರ ಪ್ರಮಾಣದ ಹಣ ಮತ್ತು ಹೆಂಡವನ್ನು ಸಂಗ್ರಹಿಸುತ್ತಿದೆ. ಬಿಜೆಪಿಯ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಈಗಾಗಲೇ ಪತ್ರ ಬರೆಯಲಾಗಿದ್ದು ಅಕ್ರಮಗಳ ಬಗ್ಗೆ ತೀವ್ರ ನಿಗಾ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದರು. ಅವರು ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ  ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಣಕ್ಕಾಗಿ ತಮ್ಮನ್ನೇ ತಾವು ಮಾರಿಕೊಂಡ ಸಂಗಣ್ಣ ಕರಡಿಯವರನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು, ಮುಂದೆ ಅವರನ್ನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದರು.  ಹಗರಣಗಳ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಟಕಟೆ ಹತ್ತಿರುವ ಯಡಿಯೂರಪ್ಪನವರಿಗೆ ಮತ ಕೇಳುವ ಹಕ್ಕಿಲ್ಲ.  ಇಲ್ಲಿಯ ಸ್ಥಳೀಯ ಅಧಿಕಾರಿಗಳನ್ನು ಹೊರಗೆ ಕಳಿಸಬೇಕು ಎಂದು ಅವರು ಆಗ್ರಹಿಸಿದರು.
Please follow and like us:
error