ಜಿ.ಪಂ.-ತಾ.ಪಂ. ಉಪಚುನಾವಣೆ : ಮಧ್ಯ ಮಾರಾಟ ನಿಷೇದಾಜ್ಞೆ ಜಾರಿ

  ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳ ಉಪಚುನಾವಣೆಗಳ ಸಂಬಂಧ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯಪಾನ, ಮದ್ಯ ಮಾರಾಟ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಆದೇಶ ಹೊರಡಿಸಿದ್ದಾರೆ.
ಗಂಗಾವತಿ ತಾಲ್ಲೂಕಿನ ಜಿಲ್ಲಾ ಪಂಚಾಯತಿ ಕನಕಗಿರಿ ಕ್ಷೇತ್ರದಲ್ಲಿ ಹಾಗೂ ಕುಷ್ಟಗಿ ತಾಲ್ಲೂಕಿನ ತಾಲ್ಲೂಕು ಪಂಚಾಯತಿ ಯರಗೇರಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ನಿಮಿತ್ಯ ಜ.೩೧ ರ ಬೆಳಿಗ್ಗೆ ೬ ಗಂಟೆಯಿಂದ ಫೆ.೦೨ ರಂದು ಬೆಳಿಗ್ಗೆ ೬ ಗಂಟೆಯವರೆಗೆ ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ  ಮತ ಎಣಿಕೆ ನಿಮಿತ್ಯ  ಫೆ.೦೩ ರ ಸಾಯಂಕಾಲ ೬ ಗಂಟೆಯಿಂದ ಫೆ.೦೫ ರ ಬೆಳಿಗ್ಗೆ ೬ ಗಂಟೆಯವರೆಗೆ ಗಂಗಾವತಿ ನಗರ ಹಾಗೂ ಕುಷ್ಟಗಿ ಪಟ್ಟಣದಲ್ಲಿ ಎಲ್ಲಾ ವೈನ್‌ಶಾಪ್, ಬಾರ್‌ಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟ ನಿಷೇಧಿಸಿ, ಪಾನ ನಿಷೇಧ ದಿನ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು   ಆದೇಶದಲ್ಲಿ ತಿಳಿಸಿದ್ದಾರೆ.

Leave a Reply