ಕನಕಗಿರಿ ಉತ್ಸವದಲ್ಲಿ ಜಿಲ್ಲಾ ಕೃಷಿ ಉತ್ಸವ

ಕೊಪ್ಪಳ, ಫೆ. ೨೧  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ರಾಯಚೂರು ಕೃಷಿ ವಿವಿ, ಗಂಗಾವತಿ ಕೃಷಿ ವಿಜ್ಞಾನ ಕೇಂದ್ರ, ಜಿಲ್ಲಾ ಕೃಷಿಕ ಸಮಾಜ ಹಾಗೂ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕೃಷಿ ಉತ್ಸವ ಫೆ. ೨೩ ಮತ್ತು ೨೪ ರಂದು ಕನಕಗಿರಿಯ ಎಪಿಎಂಸಿ ಆವರಣದಲ್ಲಿ ನಡೆಯಲಿದೆ.
  ಜಿಲ್ಲಾ ಕೃಷಿ ಉತ್ಸವದ ಉದ್ಘಾಟನೆ ಫೆ. ೨೩ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಡೆಯಲಿದೆ.  ಸುವರ್ಣಗಿರಿ ವಿರಕ್ತಮಠದ ಡಾ. ಚನ್ನಮಲ್ಲ ಮಹಾಸ್ವಾಮಿಗಳು, ಸುಳೇಕಲ್‌ನ ಭುವನೇಶ್ವರಯ್ಯ ತಾತನವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.  ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಕೃಷಿ ಉತ್ಸವದ ಉದ್ಘಾಟನೆ ನೆರವೇರಿಸುವರು.  ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ಆಂಜನೇಯ ನಾಯಕ್ ಅಧ್ಯಕ್ಷತೆ ವಹಿಸುವರು.  ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಕೃಷಿ ವಸ್ತುಪ್ರದರ್ಶನ ಉದ್ಘಾಟಿಸುವರು.  ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ, ರಾಘವೇಂದ್ರ ಹಿಟ್ನಾಳ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ, ಅಮರನಾಥ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಮಲ್ಲಿಕಾರ್ಜುನ ನಾಗಪ್ಪ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ಜಿ.ಪಂ. ಸದಸ್ಯ ವಿರೇಶ್ ಸಮಗಂಡಿ, ತಾ.ಪಂ. ಅಧ್ಯಕ್ಷೆ ಈರಮ್ಮ ಮುದಿಯಪ್ಪ ಬೇವಿನಾಳ, ಗಂಗಾವತಿ ಕೃಷಿಕ ಸಮಾಜದ ಅಧ್ಯಕ್ಷ ಚನ್ನಪ್ಪ ಮಳಗಿ, ತಾ.ಪಂ. ಸದಸ್ಯ ಹೊನೂರಸಾಬ ಬೆನ್ನೂರ, ಸರ್ವಮಂಗಳ ಮೃತ್ಯುಂಜಯ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಕೃಷಿ ಉತ್ಸವದ ಅಂಗವಾಗಿ ಫೆ. ೨೩ ರಂದು ಒಣ ವಲಯದಲ್ಲಿ ಕೃಷಿ ಮಾರ್ಗೋಪಾಯಗಳು, ಸಾವಯವ ಕೃಷಿ ಸದ್ಯದ ಅವಶ್ಯಕತೆ, ಕೃಷಿ ಮಾರಾಟ ವ್ಯವಸ್ಥೆ ನಡೆದುಬಂದ ದಾರಿ, ಹೈನುಗಾರಿಕೆ ಒಂದು ಲಾಭದಾಯಕ ಉದ್ಯಮ ಕುರಿತು ವಿಚಾರಗೋಷ್ಠಿಗಳು ನಡೆಯಲಿವೆ.  ಫೆ. ೨೪ ರಂದು ಕೃಷಿಯಲ್ಲಿ ಮಹಿಳೆಯರ ಪಾತ್ರ, ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗ ಸೂತ್ರಗಳು ಕುರಿತು ವಿಚಾರಗೋಷ್ಠಿ ನಡೆಯಲಿವೆ.  ರೈತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೃಷಿ ಉತ್ಸವ ಯಶಸವಿಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.
Please follow and like us:
error