ಐಎಎಸ್/ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ : ತರಬೇತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆ ಐಎಎಸ್/ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಅರ್ಜಿ ಸಲ್ಲಿಸಲು ಜು.೨೦ ಕೊನೆಯ ದಿನವಾಗಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ವರ್ಗಗಳಿಗೆ ಸೇರಿದವರಾಗಿರಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ www.kbcwd.in ನ್ನು ನೋಡಬಹುದು. ಅಥವಾ ಮೊಬೈಲ್ ಸಂಖ್ಯೆ: ೮೧೨೩೨೪೮೭೦೭, ೯೪೪೯೭೨೧೮೯೫ ನ್ನು ಸಂಪರ್ಕಿಸಬಹುದಾಗಿದೆ .

Related posts

Leave a Comment