ಡಾ. ಸುರೇಶ್ ಇಟ್ನಾಳ್ ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿ

ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಸುರೇಶ್ ಬಿ. ಇಟ್ನಾಳ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

  ಅಪರ ಜಿಲ್ಲಾಧಿಕಾರಿಯಾಗಿದ್ದ ಗೋವಿಂದರೆಡ್ಡಿ ಅವರು ಗುಲಬರ್ಗಾ ಜಿಲ್ಲೆಗೆ ವರ್ಗಾವಣೆಗೊಂಡ ಕಾರಣ ತೆರವಾಗಿದ್ದ ಸ್ಥಾನಕ್ಕೆ ಡಾ. ಸುರೇಶ್ ಬಿ. ಇಟ್ನಾಳ್ ಅವರು ನೇಮಕಗೊಂಡಿದ್ದಾರೆ.  ಡಾ. ಸುರೇಶ್ ಅವರು ಈ ಮೊದಲು ಹಾವೇರಿ ಜಿಲ್ಲೆ ಸವಣೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ, ಧಾರವಾಡ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.  

Leave a Reply